ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಬಸ್: ಚಿತ್ರದುರ್ಗದಲ್ಲಿ ರಾಜಹಂಸ ಬಸ್ ಭಸ್ಮ, ಪ್ರಯಾಣಿಕರು ಸುರಕ್ಷಿತ!
ಚಿತ್ರದುರ್ಗ, ನವೆಂಬರ್ 21: ಚಿತ್ರದುರ್ಗ ಜಿಲ್ಲೆಯಲ್ಲಿ ಭಾರಿ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ರಾಜಹಂಸ ಬಸ್ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು, ಕ್ಷಣಾರ್ಧದಲ್ಲಿ ಇಡೀ ಬಸ್ ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿದೆ. ಸೀಬಾರ ಸಮೀಪದ ಗೋಶಾಲೆ ಬಳಿ ಈ ಘಟನೆ ನಡೆದಿದೆ. ಬಸ್ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಪ್ರಯಾಣಿಕರಲ್ಲಿ ಆತಂಕ ಮನೆಮಾಡಿತ್ತು. ಆದರೆ ಚಾಲಕನ ಸಮಯಪ್ರಜ್ಞೆಯಿಂದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ಶಂಕೆ ಬಸ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ…